Breaking News

ಹೆಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರಇಂದು ರಾಜ್ಯದ 25ನೇ ಮಂತ್ರಿಯಾಗಿ ಹೆಚ್.ಡಿ ಕುಮಾರಸ್ವಾಮಿ ಅವರು ಬೆಂಗಳೂರಿನ ವಿಧಾಸೌಧದ ಮುಂದೆ ಕನ್ನಡ ನಾಡಿನ ಜನತೆ ಮತ್ತು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರ ಮಾಡಿದರು. ಇದು 2ನೇ ಬಾರಿ ಕರ್ನಾಟಕ ಮುಖ್ಯಮಂತ್ರಿಯಾಗಿ ಹೆಚ್.ಡಿ ಕುಮಾರ ಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿರುವ ಸಂದರ್ಭವಾಗಿದೆ.
ಈಗ 4.30 ಕ್ಕೆ ವಿಧಾನಸೌಧದ ಮುಂಭಾಗದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಕುಮಾರಸ್ವಾಮಿ ಅವರಿಗೆ ರಾಜ್ಯಪಾಲ ವಜುಬಾಯಿವಾಲಾ  ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಕಾಂಗ್ರೆಸ್ ಜತೆ ಸೇರಿ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಲಿರುವ ಕುಮಾರಸ್ವಾಮಿ ಎರಡು ಬಾರಿ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾದ ದಾಖಲೆ ಮಾಡಿದ್ದಾರೆ. ಇನ್ನು ಇಂದು ನಡೆದ ಪದಗ್ರಹಣ ಕಾರ್ಯಕ್ರಮದ ವೇಳೆಯಲ್ಲಿ  ಹಚ್.ಡಿ ದೇವೇಗೌಡ್ರು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಮತಾ ಬ್ಯಾನರ್ಜಿ, ಚಂದ್ರಬಾಬಯ ನಾಯ್ದು, ಎರಡು ಪಕ್ಷದ ಶಾಸಕರು, ಸಂಸದರು, ನಾಯಕರುಗಳು ಭಾಗವಹಿಸಿದ್ದರು.
ಇದಲ್ಲದೇ ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಿ ತಮ್ಮ ನೆಚ್ಚಿನ ಪಕ್ಷದ ನಾಯಕರ ಪದಗ್ರಹಣಕ್ಕೆ ಸಾಕ್ಷಿಯಾದರು.YOU MAY ALSO LIKE
No comments