Breaking News

ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್

ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್


  • ಇಂದು ದೆಹಲಿಯ ಕಾಂಗ್ರೆಸ್ ಮುಖ್ಯ ಕಚೇರಿಯಲ್ಲಿ ಅಧ್ಯಕ್ಷರ ಆಯ್ಕೆಯನ್ನು ಅಂತಿಮಗೊಳಿಸಲಾಗಿದ್ದು ಜೂ.14ರಂದು ಅಧಿಕೃತ ಪ್ರಕಟಣೆ ಹೊರಡಿಸಲಾಗುತ್ತದೆ. ಮುಂದಿನ ವರ್ಷ ನಡೆಯುವ ಲೋಕಸಭಾ ಚುನಾವಣೆ ದೃಷ್ಟಿಯಿಂದ ದಿನೇಶ್ ಗುಂಡೂರಾವ್ ಅವರನ್ನು ನೇಮಕಗೊಳಿಸಲಾಗಿದೆ.
  • ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಎಂ.ಬಿ. ಪಾಟೀಲ್ ಅವರಿಗೆ ಎರಡನೇ ಹಂತದಲ್ಲಿ ಸಚಿವ ಸ್ಥಾನದ ಭರವಸೆ ನೀಡಲಾಗಿದೆ. ನಿನ್ನೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಎಂ.ಪಿ.ಪಾಟೀಲ್ ಅವರನ್ನು ಹೈಕಮಾಂಡ್ ಕರೆಸಿಕೊಂಡಿತ್ತು. ರಾಜ್ಯದ ದೆಹಲಿ ಮಟ್ಟದ ರಾಜ್ಯ ನಾಯಕರಿಗೆ ಪಾಟೀಲರ ಮೇಲೆ ಒಲವಿದ್ದರೆ ದಿನೇಶ್ ಅವರನ್ನು ನೇಮಿಸುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಒತ್ತಡವೇರಿದ್ದರು.
    YOU MAY ALSO LIKE

    No comments