ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಖಡಕ್ ಎಚ್ಚರಿಕೆ! - News Desk

Saturday, July 21, 2018

ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಖಡಕ್ ಎಚ್ಚರಿಕೆ!


ಕಾಂಗ್ರೆಸ್ ನಾಯಕರಿಗೆ  ಹೈಕಮಾಂಡ್ ಖಡಕ್ ಸಂದೇಶ ರವಾನಿಸಿದ್ದು, ಮೈತ್ರಿ ಸರ್ಕಾರದ ಕುರಿತು ಸಾರ್ವಜನಿಕವಾಗಿ ಗೊಂದಲಕಾರಿ ಹೇಳಿಕೆಯನ್ನು ನೀಡಬಾರದು ಎಂದು ಎಚ್ಚರಿಕೆ ನೀಡಿದೆ.

ಮೈತ್ರಿ ಸರ್ಕಾರದ ಕುರಿತು ರಾಜ್ಯ ಕಾಂಗ್ರೆಸ್ ನಾಯಕರು ನೀಡುತ್ತಿರುವ ಹೇಳಿಕೆಗಳು ಸರ್ಕಾರದ ಆಡಳಿತದ ಮೇಲೆ ಪ್ರಭಾವ ಬೀರಿದ್ದು, ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಟೀಕೆಗೆ ಗುರಿಯಾಗಿದೆ.  ಜೆಡಿಎಸ್ ಜೊತೆ ಸರ್ಕಾರ ರಚನೆ ತೀರ್ಮಾನಕ್ಕೆ ಹೈಕಮಾಂಡ್ ಗೆ ಬಿಟ್ಟಿದ್ದು, ಹೈಕಮಾಂಡ್ ತೀರ್ಮಾನವನ್ನು ಯಾರು ಪ್ರಶ್ನಿಸುವಂತಿಲ್ಲ. ಅಲ್ಲದೇ ಮೈತ್ರಿ ಸರ್ಕಾರದ ಕುರಿತು ಸಾರ್ವಜನಿಕವಾಗಿ ಯಾವುದೇ ಗೊಂದಲಕಾರಿ ಹೇಳಿಕೆಯನ್ನು ನೀಡಬಾರದು ಎಂದು ಹೈಕಮಾಂಡ್ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಮೂಲಕ ಎಚ್ಚರಿಕೆ ರವಾನಿಸಿದೆ.


YOU MAY ALSO LIKE

No comments:

Post a Comment