Breaking News

ಸಿಎಂ ದೆಹಲಿ ಭೇಟಿ ಫಲಪ್ರದ, 2500 ಕೋಟಿಗೂ ಹೆಚ್ಚು ಅನುದಾನ ಪಡೆಯುವಲ್ಲಿ ಹೆಚ್ಡಿಕೆ ಯಶಸ್ವಿ..!


ಮುಂಗಾರು ಅಧಿವೇಶನದ ಹಿನ್ನೆಲೆಯಲ್ಲಿ ರಾಜ್ಯದ ಸಂಸದರು ಮತ್ತು ರಾಜ್ಯಸಭಾ ಸದಸ್ಯರೊಂದಿಗೆ ಚರ್ಚಿಸುವ ಹಿನ್ನೆಲೆಯಲ್ಲಿ ದೆಹಲಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿಗಳು ಈ ವೇಳೆಯಲ್ಲಿ ಕೇಂದ್ರ ಸರ್ಕಾರದ ಆಹಾರ ಮತ್ತು ನಾಗರೀಕರ ಸರಬರಾಜು ಸಚಿವರು, ಭೂ ಸಾರಿಗೆ ಮತ್ತು ಜಲಸಂಪನ್ಮೂಲ ಸಚಿವರು, ಕೃಷಿ ಸಚಿವರು, ರೈಲ್ವೆ ಮತ್ತು ಕಲ್ಲಿದ್ದಲು ಸಚಿವರು ಸೇರಿದಂತೆ ರಕ್ಷಣಾ ಸಚಿವರನ್ನು ಖುದ್ದಾಗಿ ಭೇಟಿ ಮಾಡಿ ಚರ್ಚಿಸಿದ್ದರು. 'ತಮ್ಮ ಭೇಟಿಯ ವೇಳೆ ರಾಜ್ಯದ ಕೋರಿಗೆಗಳಿಗೆ ಎಲ್ಲಾ ಸಚಿವರುಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಸಂತೋಷ ತಂದಿದೆ. ಹಾಗೆಯೇ, ಸಚಿವರೊಂದಿಗೆ ನಡೆಸಿದ ಮಾತುಕತೆಯೂ ಫಲಪ್ರಧವಾಗಿತ್ತು. ಇದಕ್ಕಾಗಿ ಸಹಕಾರ ನೀಡಿದ ಎಲ್ಲಾ ಸಚಿವರನ್ನು ರಾಜ್ಯದ ಪರವಾಗಿ ಅಭಿನಂದಿಸುವುದಾಗಿ ಮುಖ್ಯಮಂತ್ರಿಗಳು ಇಂದು ಇಲ್ಲಿ ತಿಳಿಸಿದರು.

ಕೇಂದ್ರ ಸರ್ಕಾರದ ವಿವಿಧ ಸಚಿವರೊಂದಿಗೆ ನಡೆಸಿದ ಮಾತುಕತೆಯ ಫಲವಾಗಿ ಸುಮಾರು 2500 ಕೋಟಿ ರೂ.ಗಳಿಗೂ ಮೊತ್ತಕ್ಕೂ ಅಧಿಕ ಮೊತ್ತದ ಅನುದಾನವನ್ನು ಪಡೆದುಕೊಳ್ಳುವಲ್ಲಿ ಮತ್ತು ವಿವಿಧ ಯೋಜನೆಗಳಿಗೆ ಅನುಮತಿ ದೊರಕಿಸಿಕೊಳ್ಳುವಲ್ಲಿ ತಮ್ಮ ಎರಡು ದಿನಗಳ ದೆಹಲಿ ಭೇಟಿಯು ಸಂಪೂರ್ಣವಾಗಿ ಯಶಸ್ವಿಯಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಣ್ಣಿಸಿದ್ದಾರೆ.

ಆಹಾರ ಮತ್ತು ನಾಗರೀಕ ಸರಬರಾಜು ಸಚಿವರಾದ ರಾಮ್ ವಿಲಾಸ್ ಪಾಸ್ವಾನ್ ಅವರೊಂದಿಗೆ ಚರ್ಚಿಸಿದ ವೇಳೆ 2014 ರಿಂದ ಇಂದಿನವರೆಗೆ ರಾಜ್ಯಕ್ಕೆ ಬಿಡುಗಡೆಯಾಗಬೇಕಿದ್ದ ಬೆಂಬಲ ಬೆಲೆಯ ಬಾಕಿ ಮೊತ್ತವಾದ 954 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಆದೇಶ ನೀಡಿರುತ್ತಾರೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಾಹಿತಿಯನ್ನು ಹಂಚಿಕೊಂಡರು.

ರಾಜ್ಯದಲ್ಲಿ 85 ಲಕ್ಷ ಲೀಟರ್ಗಳಷ್ಟು ಹಾಲು ಉತ್ಪಾದನೆಯಾಗುತ್ತಿದ್ದು, ರಾಜ್ಯದ ಹಲವಾರು ಜಿಲ್ಲೆಗಳಲ್ಲಿರುವ ಜಿಲ್ಲಾ ಹಾಲು ಉತ್ಪಾದಕರ ಸಂಘಗಳಲ್ಲಿ ಮೆಗಾಡೈರಿಗಳನ್ನು ಸ್ಥಾಪಿಸಬೇಕೆನ್ನುವ ರಾಜ್ಯದ ಉದ್ದೇಶವನ್ನು ಮೆಚ್ಚಿಕೊಂಡ ಕೃಷಿ ಸಚಿವರಾದ ರಾಧಾ ಮೋಹನ್ ಸಿಂಗ್ ಅವರು ಇದಕ್ಕಾಗಿ 900 ಕೋಟಿ ರೂ.ಗಳ ಅನುದಾನ ಬಿಡುಗಡೆಗೆ ಸಮ್ಮತಿ ಸೂಚಿಸಿದ್ದಾರೆ. ಈ ಅನುದಾನದಲ್ಲಿ ಹಾಸನ, ಕೋಲಾರ ಮತ್ತು ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೆಗಾ ಡೈರಿಗಳನ್ನು ಸ್ಥಾಪಿಸಲಾಗುವುದು ಎಂದು ಕುಮಾರಸ್ವಾಮಿಯವರು ತಿಳಿಸಿದರು.


YOU MAY ALSO LIKE


No comments