Breaking News

ನಮ್ಮ ಶಾಸಕರನ್ನು ಟಚ್ ಮಾಡಲಿ ಕಾಂಗ್ರೆಸ್ ನಾಯಕರಿಗೆ ಯಡಿಯೂರಪ್ಪ ಸವಾಲು..!

Yadiyurappa-challenges-Congress-leaders-to-touch-our-MLAs
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಬೆಂಗಳೂರು: ಕಾಂಗ್ರೆಸ್ ನವರು ಕೇವಲ ಐವರನ್ನಲ್ಲ ನಮ್ಮ 104 ಶಾಸಕರನ್ನು ಮುಟ್ಟಲಿ ಎಂದು ಬಿಜೆಪಿಯ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ  ಅವರು ಹೇಳಿದ್ದಾರೆ.

     ಕಾಂಗ್ರೆಸ್ಸಿನ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರು ಬಿಜೆಪಿಯ 5 ಶಾಸಕರು ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ. ಬಿಜೆಪಿಯ ಐವರನ್ನು ನಾವು ಟಚ್ ಮಾಡಿದ್ದೇವೆ ಎಂದು ಹೇಳಿದ್ದರು. ಈ ಕುರಿತು ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು ಕೇವಲ ಐದೇಕೆ ನಾವು 104 ಶಾಸಕರಿದ್ದೇವೆ ಎಲ್ಲರನ್ನೂ ಟಚ್ ಮಾಡಲಿ ಎಂದು ತಿರುಗೇಟು ನೀಡಿದ್ದಾರೆ.  
Ganesh Chaturthi Deals

       ಈ ಸಂದರ್ಭದಲ್ಲಿ ಮಾತನಾಡಿ, ನಮ್ಮ ರಾಷ್ಟ್ರೀಯ ಅಧ್ಯಕ್ಷರು ಕರೆಮಾಡಿ ಮೈತ್ರಿ ಸರಕಾರದ ವಿರುದ್ದ ಯಾವುದೇ ಹೇಳಿಕೆ ನೀಡದಂತೆ ತಾಕೀತು ಮಾದೀದ್ದಾರೆ. ಅಂತೆಯೇ ನಮ್ಮ ಎಲ್ಲ ಮುಖಂಡರಿಗೆ ತಿಳಿಸಿದ್ದೇನೆ. ಸಮಸ್ಯೆ ಇರುವುದು ಕಾಂಗ್ರೆಸ್ ಮತ್ತು ಜೆಡಿಎಸ್ ನಲ್ಲಿ ಅವರು ಅದನ್ನು ಬಗೆಹರಿಸಿಕೊಳ್ಳಲಿ ಅದನ್ನು ಬಿಟ್ಟು ನಮ್ಮ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ಹೇಳಿದರು. 


SPONSORED CONTENTNo comments